ನವದೆಹಲಿ : ದಿನೇ ದಿನೆ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 1,607 ಕೋವಿಡ್-19 ಹೊಸ ಪ್ರಕರಣಗಳು ದಾಖಲಾಗಿವೆ.ಪಾಸಿಟಿವ್ ಪ್ರಮಾಣವು ಶೇ.5.28ಕ್ಕೆ ತಲುಪಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,609ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ವರದಿಯಾಗಿದೆ.ಒಟ್ಟು 139 ಮಂದಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. 3,863 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಪ್ರಸ್ತುತ ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 18,684 ರಷ್ಟಿದೆ