ಹೊಸದಿಲ್ಲಿ,ಸೆ.19 : ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಸೆ.27ರಂದು ಕರೆ ನೀಡಲಾಗಿರುವ ಭಾರತ ಬಂದ್ಗಾಗಿ ಶನಿವಾರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಂಯುಕ್ತ ಕಿಸಾನ ಮೋರ್ಚಾ (ಎಸ್ ಕೆ ಎಂ),ಪ್ರತಿಭಟನೆಯು ಶಾಂತಿಯುತವಾಗಿರುತ್ತದೆ ಮತ್ತು ಜನರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದೆ. ರೈತರೊಂದಿಗೆ ಕೈ ಜೋಡಿಸುವಂತೆ ಸಮಾಜದ ಎಲ್ಲ ವರ್ಗಗಳನ್ನು ಕೋರಿಕೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ಅನಾನುಕೂಲಗಳನ್ನು ಕಡಿಮೆಗೊಳಿಸಲು ಬಂದ್ ಬಗ್ಗೆ ಸಾಕಷ್ಟು ಪ್ರಚಾರ ನೀಡುವಂತೆ ಸದಸ್ಯ ಸಂಘಟನೆಗಳಿಗೆ ಸೂಚಿಸಲಾಗಿದೆ.