ನವದೆಹಲಿ : 2022ರ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಬಗ್ಗು ಬಡಿದು ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಯುವಪಡೆಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅತ್ಯಂತ ಹೆಮ್ಮೆಯಿದೆ. ಐಸಿಸಿ ಅಂಡರ್- 19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು.ಅವರು ಈ ಪಂದ್ಯಾವಳಿಯಲ್ಲಿ ಉತ್ತಮ ಸ್ಥೈರ್ಯವನ್ನು ತೋರಿಸಿದ್ದಾರೆ. ಭಾರತದ