ಲಕ್ನೋ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್ಗಾಗಿ ಧೋರನ್ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು. ನ್ಯಾಯಮೂರ್ತಿ ವಿವೇಕ್ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ