ಬಾಗಲಕೋಟೆ : ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ಸೋಮವಾರ(ಇಂದು) ಸಾವನಪ್ಪಿದ್ದಾರೆ. ಗೋವಾದಿಂದ ಬರುವಾಗ ತುಳಸಿಗೇರಿ ಬಳಿ ಶಾಸಕರ ಕಾರು ಲಾರಿಗೆ ಢಿಕ್ಕೆಯಾಗುವುದನ್ನು ತಪ್ಪಿಸಲು ಹೋಗಿ ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಾಸಕ ಸಿದ್ದುನ್ಯಾಮಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ