ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಘಟಾನುಘಟಿಗಳಿಂದ ಮತದಾನ ನಡೆಯುತ್ತಿದೆ.ಬಿಜೆಪಿ ಶಾಸಕ ವಿಜಯ್ ಕುಮಾರ್ ಸಾವಿನಿಂದಾಗಿ ಈ ಕ್ಷೇತ್ರದ ವಿಧಾನಸಭೆ ಮತದಾನ ಮುಂದೂಡಲಾಗಿತ್ತು. ಹೀಗಾಗಿ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿಯಿಂದ ದಿವಂಗತ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು ಮತ್ತು ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಕಣಕ್ಕಿಳಿದಿದ್ದಾರೆ.ಜಯನಗರ ಟಿ ಬ್ಲಾಕ್ ನ ಮತಗಟ್ಟೆಯಲ್ಲಿ ನಟಿ ಭಾರತಿ ವಿಷ್ಣುವರ್ಧನ್ ಮತಚಲಾಯಿಸಿದರು.