ಬೆಂಗಳೂರು: ಹಣಕಾಸು ಖಾತೆಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಟ್ಟು ಹಿಡಿದು ಕೊನೆಗೂ ಈ ಖಾತೆ ಜೆಡಿಎಸ್ ಪಾಲಾಗುವುದರೊಂದಿಗೆ ಎಲ್ಲವೂ ಸುಖಾಂತ್ಯವಾಯಿತು ಎನ್ನುವಷ್ಟರಲ್ಲಿ ಮತ್ತೊಂದು ಸಮಸ್ಯೆ ತಲೆದೋರಿದೆ.ಇದೀಗ ಮತ್ತೊಂದು ಪ್ರಮುಖ ಖಾತೆ ಗೃಹ ಇಲಾಖೆಗಾಗಿ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ನ ಎಚ್ ಡಿ ರೇವಣ್ಣ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.ಹೀಗಾಗಿ ಮತ್ತೆ ಖಾತೆ ಹಂಚಿಕೆ ಕಗ್ಗಂಟಾಗಲಿದೆ. ಈ ಮೊದಲು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಹುದ್ದೆಗಾಗಿ ಹೈಕಮಾಂಡ್ ಮುಂದೆ ಒತ್ತಡ