ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರಿಗೆ ಪಾಲುದಾರ ಪಕ್ಷ ಜೆಡಿಎಸ್ ಶಾಕ್ ಕೊಟ್ಟಿದೆ.ಶೀಘ್ರವೇ ಸಂಪುಟ ವಿಸ್ತರಣೆ ಮಾಡಲು ಡಿಸಿಎಂ ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ಮಾತುಕತೆ ನಡೆಸಿ ಒಪ್ಪಿಗೆ ಪಡೆದಿದ್ದರು. ಆದರೆ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಸಚಿವ ಎಚ್ ಡಿ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಇದಕ್ಕೆ ಕಾರಣ ಆಷಾಢ ಮಾಸ!