ಬೆಂಗಳೂರು: ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಘಟನೆಯೊಂದು ಬೆಂಗಳೂರಿನಲ್ಲಿ ನಡೆಯುವುದು ಸ್ವಲ್ಪದರಲ್ಲೇ ತಪ್ಪಿಹೋಗಿದೆ. ಟಿಬೆಟ್ ಧರ್ಮಗುರು ದಲೈಲಾಮಾ ಅವರ ಹತ್ಯೆಗೆ ಬೆಂಗಳೂರಿನಲ್ಲಿ ಸ್ಕೆಚ್ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ಮೂಲದ ಜೆಎಂಬಿ ಉಗ್ರ ಸಂಘಟನೆಯ ಉಗ್ರರು ರಾಮನಗರದಲ್ಲಿ ಕುಳಿತು ದಲೈಲಾಮ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಭಯಾನಕ ಸತ್ಯ ಎನ್ ಐಎ ತನಿಖೆಯಿಂದ ಬಹಿರಂಗಗೊಂಡಿದೆ.ಜೆಎಂಬಿ ಉಗ್ರ ಮುನೀರ್ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಬಿಹಾರ