ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಇಂದಿನಿಂದ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಹೊಸ ಬಜೆಟ್ ಮಂಡಿಸಲಿದ್ದಾರೆ.ಅಧಿವೇಶನಕ್ಕೆ ಮೊದಲು ರಾಜ್ಯಪಾಲ ವಜುಬಾಯಿ ವಾಲಾರಿಂದ ಭಾಷಣ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಸಮ್ಮಿಶ್ರ ಸರ್ಕಾರಕ್ಕಿರುವ ಮೊದಲ ಸವಾಲು ಎಂದರೆ ಬಜೆಟ್ ಮಂಡನೆ. ಆದರೆ ನಿನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.