ನವದೆಹಲಿ : ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡುವ ಬಗ್ಗೆ ಈ ಬಾರಿಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ಚರ್ಚೆ ಆಗಿಲ್ಲ. ಸೋಮವಾರ ನಡೆದ ಸಭೆಯಲ್ಲಿ ಈ ತಿಂಗಳವರೆಗೆ ಬಾಕಿ ಉಳಿಸಿಕೊಂಡಿರುವ 25.84 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಸಭೆ ಆರಂಭ ಆಗುತ್ತಿದ್ದಂತೆ ತಮಿಳುನಾಡು ತಮಗೆ ಸುಪ್ರೀಂ ಕೋರ್ಟ್