ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ನಗರ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇನ್ನೂ ಎರಡು ಮೂರು ದಿನ ಆಸ್ಪತ್ರೆಯಲ್ಲೇ ಕಳೆಯಲಿದ್ದಾರೆ ಎನ್ನಲಾಗಿದೆ.ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆಯಾಗುತ್ತಿದ್ದರೂ ಇನ್ನೂ ಎರಡು ಮೂರು ದಿನ ಕಳೆದ ಬಳಿಕವಷ್ಟೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.ಈಗಲೂ ಕರುಣಾನಿಧಿ ಅಭಿಮಾನಿಗಳು ಆಸ್ಪತ್ರೆಯ ಸುತ್ತ ಬರುತ್ತಲೇ ಇದ್ದಾರೆ. ಇದಲ್ಲದೆ ಗಣ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಕರುಣಾನಿಧಿ ಆರೋಗ್ಯ ವಿಚಾರಿಸುತ್ತಿದ್ದಾರೆ.