ಕೇರಳ (ಅ 17 ) ; ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ