ಬೆಂಗಳೂರು(ಸೆ.27) : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ ರೈತಪರ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಇಂದು ಭಾರತ್ ಬಂದ್ಗೆ ಕರೆ ನೀಡಿವೆ. ಹೀಗಾಗಿ ಇಂದು ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇಂದು ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ಕರ್ನಾಟಕವೂ ಬಹುತೇಕ ಬಂದ್ ಆಗುವ ನಿರೀಕ್ಷೆ ಇದೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ಗೆ ಕರೆ ಕೊಟ್ಟಿದ್ದು, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ. ದೇಶಾದ್ಯಂತ