ಕೇರಳ, ಕೊಡಗು ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಕೊಲ್ಲೂರು ಮೂಕಾಂಬಿಕೆ!

ಬೆಂಗಳೂರು| Krishnaveni K| Last Modified ಭಾನುವಾರ, 19 ಆಗಸ್ಟ್ 2018 (09:06 IST)
ಬೆಂಗಳೂರು: ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಭಾರೀ ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿರುವ ಜನರ ನೆರವಿಗೆ ಬರಲು ಕೊಲ್ಲೂರು ಮೂಕಾಂಬಿಕಾ ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ.

ನಿನ್ನೆ ನಡೆದ ಮೂಕಾಂಬಿಕಾ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರವಾಹ ಪೀಡಿತ ಕೇರಳಕ್ಕೆ 1 ಕೋಟಿ ರೂ. ಮತ್ತು ಕೊಡಗು ಜಿಲ್ಲೆಗೆ ದೇವಾಲಯದ ವತಿಯಿಂದ 25 ಲಕ್ಷ ರೂ.ಗಳ ಧನ ಸಹಾಯ ಮಾಡಲಾಗುತ್ತದೆ.


ಈ ಪರಿಹಾರ ಧನವನ್ನು ಎರಡೂ ರಾಜ್ಯಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಆಡಳಿತ ಮಂಡಳಿ ನೀಡಲಿದೆ. ಅಷ್ಟೇ ಅಲ್ಲದೆ, ಪ್ರವಾಹ ಸಂತ್ರಸ್ತರಿಗಾಗಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆಯನ್ನೂ ನೆರವೇರಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :