ಬೆಂಗಳೂರು : ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ತೀವ್ರ ಅಭಾವದಿಂದ ಒಂದು ಕಡೆ ಮಕ್ಕಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಿದ್ದರೆ, ಮತ್ತೊಂದು ಕಡೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಮತ್ತು ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರು ಲಸಿಕೆಗಾಗಿ ಅಲೆದಾಡುತ್ತಿದ್ದಾರೆ.ಜನವರಿ 3ರಿಂದ 15-18 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಆರಂಭಿಸಿದ ಕೇಂದ್ರ ಸರ್ಕಾರ ಕೋವ್ಯಾಕ್ಸಿನ್ ಲಸಿಕೆ ಮಾತ್ರ ನೀಡಲು ಅನುಮತಿ ನೀಡಿತ್ತು.ಪ್ರಾರಂಭದಲ್ಲಿ ರಾಜ್ಯಾದ್ಯಂತ