ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.ಜೊತೆಗೆ ಮೈಸೂರಿನ ಮೋದಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು. ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಗೊಂದಲ ಸೃಷ್ಟಿಸಿದೆ.ಮೋದಿ ರಾಜ್ಯ ಪ್ರವಾಸ ಕೋವಿಡ್ ಪರೀಕ್ಷೆಯ ಗೊಂದಲ ತಂದಿಟ್ಟಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು, ಬಿಜೆಪಿ ಮುಖಂಡರು, ಸಾರ್ವಜನಿಕರು ಕೊರೊನಾ ಟೆಸ್ಟ್