ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ. ಈ ಸುದ್ದಿ ಈ ಭಾಗದ ರೈತರಿಗೆ ಸಂತಸ ತಂದಿದ್ರೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟಿಗೆ 30,216 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು