ನವದೆಹಲಿ: 2016 ರಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಎಲ್ಲರಿಗೂ ಗೊತ್ತೇ ಇದೆ. ಆ ಸಂದರ್ಭದಲ್ಲಿ ಸೇನೆಯ ತಂಡದ ಭಾಗವಾಗಿದ್ದ ವೀರ ಯೋಧ ಸಂದೀಪ್ ಸಿಂಗ್ ಇದೀಗ ಹುತಾತ್ಮರಾಗಿದ್ದಾರೆ.ಸರ್ಜಿಕಲ್ ಸ್ಟ್ರೈಕ್ ಮಾಡಿ ಯಶಸ್ವಿಯಾಗಿ ಭಾರತಕ್ಕೆ ಮರಳಿದ ಟೀಂನ ಭಾಗವಾಗಿದ್ದ ಯೋಧ ಲ್ಯಾನ್ಸ್ ನಾಯಕ್ ಸಂದೀಪ್ ಸಿಂಗ್ (30) ಉಗ್ರರ ಜತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ.ಕಾಶ್ಮೀರದಲ್ಲಿ ನಡೆದ ಉಗ್ರರ ಜತೆಗಿನ ಗುಂಡಿನ ಕಾಳಗದಲ್ಲಿ