ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ 2022-23ನೇ ಸಾಲಿನ ರಾಜ್ಯ ಕಲಿಕಾ ಸಾಧನಾ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ಪ್ರಾಥಮಿಕ ಶಾಲೆಗಳಿಗಿಂತ ಪ್ರೌಢಶಾಲಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಸಿದೆ. ಕೊರೊನಾ ನಂತರವೂ ಸರ್ಕಾರಿ ಶಾಲೆ ಮಕ್ಕಳ ಕಲಿಕಾ ಮಟ್ಟ ಸುಧಾರಣೆಯಾಗಿಲ್ಲ ಎಂಬುವುದು ಕಳವಳಕಾರಿ ಅಂಶವಾಗಿದೆ. ರಾಜ್ಯದ 2,618 ಸರ್ಕಾರಿ ಪ್ರಾಥಮಿಕ ಮತ್ತು 694 ಪ್ರೌಢಶಾಲೆಗಳ 3,5,8,9 ಮತ್ತು 10ನೇ