ಲಕ್ನೋ : ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಅಜಂಗಢ್ನ ಅಹ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹುಲ್ ನಗರದಲ್ಲಿ ನಡೆದಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 44 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು-ಏಳು ಮಂದಿ ಡಯಾಲಿಸಿಸ್ನಲ್ಲಿದ್ದಾರೆ.ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಜಂಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮೃತ್ ತ್ರಿಪಾಠಿ ತಿಳಿಸಿದ್ದಾರೆ.