ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ರೂಪಾಂತರಿ ವೈರಸ್ ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ