ಢಾಕಾ : ಬಾಂಗ್ಲಾದೇಶದ ಪಂಚಗಢ್ನ ಕರಟೋಯಾ ನದಿಯಲ್ಲಿ ಭಾನುವಾರ ದೋಣಿ ಮುಳುಗಿ 24 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.ಮಹಾಲಯ ಆಚರಣೆ ಹಿನ್ನೆಲೆ ಔಲಿಯಾ ಘಾಟ್ನಿಂದ ಬದ್ಧೇಶ್ವರ ದೇವಸ್ಥಾನದ ಕಡೆ ಹೋಗುತ್ತಿದ್ದ ದೋಣಿ ಮುಳುಗಿದೆ. ದೋಣಿಯಲ್ಲಿ ಬೋಡಾ, ಪಂಚ್ಪಿರ್, ಮಾರಿಯಾ ಹಾಗೂ ಬಂಘಾರಿ ಪ್ರದೇಶದ ಹಿಂದೂ ಸಮುದಾಯದ ಜನರು ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ವರದಿಗಳ ಪ್ರಕಾರ ದೋಣಿಯಲ್ಲಿ ಅದರ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ಕೂರಿಸಲಾಗಿತ್ತು. ದೋಣಿ