ಬೆಂಗಳೂರು (ಜು.15): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಯಾವುದೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಸಿಗದೆ ಪರೀಕ್ಷೆಯಿಂದ ವಂಚಿತರಾಗಕೂಡದು. ನಿಗದಿತ ಅವಧಿಯೊಳಗೆ ಎಲ್ಲ ಮಕ್ಕಳಿಗೂ ಹಾಲ್ ಟಿಕೆಟ್ ದೊರಕಿಸಲು ಕ್ರಮ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು (ಡಿಡಿಪಿಐ), ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಸಾರ್ವಜನಿಕ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ, ಸಂಬಂಧಪಟ್ಟಶಾಲಾ ಮುಖ್ಯಸ್ಥರುಗಳು ಕೂಡ ತಮ್ಮ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಹಾಲ್ ಟಿಕೆಟ್ ನೀಡಲು ಕ್ರಮ