ನವದೆಹಲಿ : ಭಾರತೀಯ ಹವಾಮಾನ ಇಲಾಖೆ 7 ರಾಜ್ಯಗಳಿಗೆ ಉಷ್ಣ ಮಾರುತದ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಉತ್ತರದ ಹಲವು ರಾಜ್ಯಗಳಲ್ಲಿ ಶುಕ್ರವಾರ ಉಷ್ಣಾಂಶ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಸಾಮಾನ್ಯ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಪಂಜಾಬ್, ಹರ್ಯಾಣ, ಗುಜರಾತ್ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರಾಸರಿ ಉಷ್ಣಾಂಶ 45 ಡಿ.ಸೆ ದಾಟಿದೆ.ಉತ್ತರಪ್ರದೇಶದ ಬಂಡಾದಲ್ಲಿ ಗರಿಷ್ಠ 47.4 ಡಿ.ಸೆ, ಪ್ರಯಾಗ್ರಾಜ್ನಲ್ಲಿ 47 ಡಿ.ಸೆ.