ವಿಜಯಪುರ: ಭದ್ರಾ ಮೇಲ್ದಂಡೆ ಕಾಲುವೆ ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ನೀರಾವರಿ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.ನೀರಾವರಿ ಸಚಿವರು ಕೋಟ್ಯಾಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಇಂತಹವರನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಬೇಕು ಎಂದು ಬಿಎಸ್ ವೈ ಮೊನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು.ಇದಕ್ಕೆ ಪ್ರತ್ಯುತ್ತರ ನೀಡಿದ್ದ ನೀರಾವರಿ ಸಚಿವರು ಈ ಅಕ್ರಮ ಟೆಂಡರ್ ನ್ನು ರದ್ದುಗೊಳಿಸಲಾಗಿದೆ. ನಾನು ಯಾವುದೇ ಅಕ್ರಮ ಮಾಡಿಲ್ಲ.