ಬೆಂಗಳೂರು : ಸರ್ವೋದಯ ದಿನದ ಪ್ರಯುಕ್ತ ಜ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಜ.30ರ ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಆ ದಿನ ಎಲ್ಲೆಡೆ ಗಾಂಧೀಜಿ ಸ್ಮರಣೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಅಂದು