ಬೆಂಗಳೂರು : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ,ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.ವಿಧಾನಸೌಧ ಬಳಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.ಇದು ನಮ್ಮ ಒಗ್ಗಟ್ಟು