ಮಂಗಳೂರು : ಡಿಸೆಂಬರ್ 01 ರಿಂದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಸ್ಥಗಿತಗೊಳಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶದನ್ವಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸುರತ್ಕಲ್ ನಲ್ಲಿ ಸ್ಥಗಿತಗೊಳಿಸಿ ಉಡುಪಿಯ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಹೆಜಮಾಡಿ ಟೋಲ್ ಗೇಟ್ ದರ ಪರಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ಗೇಟ್ ಅನ್ನು ವಿಲೀನಗೊಳಿಸಿ