ಬೆಂಗಳೂರು : ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಆ ಮೂಲಕ ರಾಜ್ಯ ಸರ್ಕಾರ, ಬಿಎಂಆರ್ಸಿಎಲ್ಗೆ ಕೋರ್ಟ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್ ಅರ್ಜಿ ಸಲ್ಲಿಸಲು ರಿಜಿಸ್ಟರ್ ಜನರಲ್ಗೆ ಹೈಕೋರ್ಟ್