ವಿಜಯಪುರ: ರಾಜ್ಯ ವಿಧಾನ ಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ನೀತಿ ಸಂಹಿತೆ ಪಾಲಿಸಲು ಅಧಿಕಾರಿಗಳು ಮುಂದಾಗಿದ್ದು, ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನಿವಾಸಕ್ಕೆ ತಹಸೀಲ್ದಾರ್, ಪಿಎಸೈ, ಮುಖ್ಯಾಧಿಕಾರಿ ಭೇಟಿ ನೀಡಿ ಅಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮ ಸ್ಥಗಿತಗೊಳಿಸಲು ಸೂಚನೆ ನೀಡಿದ ಘಟನೆ ವರದಿಯಾಗಿದೆ.