ಬೆಂಗಳೂರು : ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.ಶನಿವಾರ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಇದರಂತೆ ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ