ಬೆಳಗಾವಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ ಅವರು ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು, ದೇಶದಲ್ಲಿ ಇತ್ತಿಚಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತೆ ಕಾಂಗ್ರೆಸ್ ಗೆಲ್ಲುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು. ಎಲ್ಲೆಲ್ಲಿ ಪ್ರಧಾನಿ ನರೇಂದ್ರ ಮೊದಿ ಅವರು ಪ್ರಚಾರಕ್ಕೆ ಹೋದರೊ ಅಲ್ಲೆಲ್ಲಿ ಬಿಜೆಪಿ ಗೆದ್ದಿತ್ತು.