ನವದೆಹಲಿ : ತಾಪಮಾನ ಬದಲಾವಣೆ ಮತ್ತು ಪೌಷ್ಟಿಕಾಂಶ ಕೊರತೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಭಿನ್ನ ಗುಣಲಕ್ಷಣಗಳುಳ್ಳ 35 ಬೆಳೆಗಳ ತಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಇವನ್ನು ಅಭಿವೃದ್ಧಿಪಡಿಸಿದೆ. ಐಸಿಎಆರ್, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿ.ವಿಗಳಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು. ಪ್ರಧಾನಮಂತ್ರಿ ಕಚೇರಿಯ ಹೇಳಿಕೆಯನುಸಾರ, ಅಭಿವೃದ್ಧಿ ಪಡಿಸಲಾಗಿರುವ ನೂತನ ತಳಿಗಳು ತಾಪಮಾನ ಬದಲಾವಣೆ ಸವಾಲು ಎದುರಿಸಲು