ಹೊಸದಿಲ್ಲಿ : ದಿಲ್ಲಿ ವಾಯುಮಾಲಿನ್ಯದ ಕುರಿತು ವಸ್ತುಸ್ಥಿತಿಯಾಚೆಗಿನ ಅಭಿಪ್ರಾಯಗಳನ್ನು ಮಂಡಿಸುತ್ತಿರುವ ಟಿವಿ ಚಾನೆಲ್ಗಳ ಚರ್ಚೆಗಳ ವಿರುದ್ಧ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿವಿ ವಾಹಿನಿಗಳಲ್ಲಿನ ಸಂವಾದಗಳು ಎಲ್ಲಕ್ಕಿಂತಲೂ ಹೆಚ್ಚು ಮಾಲಿನ್ಯ ಉಂಟುಮಾಡುತ್ತಿವೆ ಎಂದು ಸಿಜೆಐ ಟೀಕಿಸಿದ್ದಾರೆ. ನ್ಯಾಯಾಲಯ ಕಂಡುಕೊಳ್ಳುವ ಸಣ್ಣಪುಟ್ಟ ಸಂಗತಿಗಳನ್ನೂ ದೊಡ್ಡ ವಿವಾದವನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ದಿಲ್ಲಿ ವಾಯು ಮಾಲಿನ್ಯ ಪರಿಸ್ಥಿತಿಯ ಕುರಿತು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)