ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್ ಅಲರ್ಟ್’ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ,