ಬೆಂಗಳೂರು : ಜೂನ್ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈನಲ್ಲಿ ಚುರುಕು ಪಡೆದುಕೊಂಡಿದ್ದು, ಜುಲೈ ಒಂದರಿಂದ ಇಂದಿನ ವರೆಗೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜುಲೈ 1ರಿಂದ ಜುಲೈ 22ರವೆರೆಗೆ ವಾಡಿಕೆಯಂತೆ ಸರಾಸರಿ 192ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದ್ರೆ, ಇದೀಗ ಜುಲೈ 1ರಿಂದ ಜುಲೈ 22ರವರೆಗೆ 215ಮಿಲಿ ಮೀಟರ್ ಮಳೆಯಾಗಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.ಅದರಲ್ಲೂ ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಇದರಿಂದ ಜೀವನದಿಗಳಿಗೆ