ಮೈಸೂರು,ಸೆ.28 : ದಸರಾ ಪ್ರಯುಕ್ತ ಮೈಸೂರು ರಾಜಮನೆತನದವರು ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸುವುದರಿಂದ ಅ.1ರಿಂದ ವಿವಿಧ ದಿನಾಂಕಗಳಂದು ಅರಮನೆ ವೀಕ್ಷಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಸಲಾಗಿದೆ. ಈ ವಿಷಯವನ್ನು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ತಿಳಿಸಿದ್ದು, ಅ.1ರಂದು ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶವಿರುವುದಿಲ್ಲ.ಅ.7ರಂದು ಖಾಸಗಿ ದರ್ಬಾರ್ನಲ್ಲಿ ರಾಜವಂಶಸ್ಥರು ಧಾರ್ಮಿಕ ಪೂಜೆ ನಡೆಸುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರವೇಶ