ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಹಾಲಿ ಶಾಸಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಎ.ಎಸ್.ಪಾಟೀಲ್ ನಡಹಳ್ಳಿ ಮಧ್ಯದ ಚುನಾವಣಾ ಕದನ ಕಣ ತಾರಕಕ್ಕೇರಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ನಾಡಗೌಡ ಅವರು ನಡಹಳ್ಳಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಹಾಗೂ ದೇವರ ಹಿಪ್ಪರಗಿ ಮತಕ್ಷೇತ್ರ ಬಿಟ್ಟು, ಜೆಡಿಎಸ್ ಸೆರ್ಪಡೆಗೊಂಡು ಅವರಿಗೂ ಕೈಕೊಟ್ಟು ಇದೀಗ ಬಿಜೆಪಿ ಸೆರ್ಪಡೆಗೊಂಡು ತಮ್ಮ ವಿರುದ್ಧ ಸ್ಪರ್ಧಿಸಿರುವ ನಡಹಳ್ಳಿ