ಬೆಂಗಳೂರು : ಉದ್ದೇಶಿತ ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ, ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಈ ನೀತಿಯನ್ನು ಮಂಡಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.