ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಕೋವಿಡ್ 19 ಮೂರನೇ ಅಲೆಯ ಭೀತಿಯೂ ಇರುವ ಹಿನ್ನೆಲೆಯಲ್ಲಿ ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆಯೂ ಬುಧವಾರ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ