ಬೆಂಗಳೂರು : ಮಹಿಳೆಯರಿಗೆ ಮಾತ್ರವಲ್ಲ, ಇನ್ನು ಮುಂದೆ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನ ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ, ವಿವಾಹ-ವಿಚ್ಛೇದಿತ ಅಥವಾ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ, ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ