ಪಟನಾ : ಗಣತಿ, ಚುನಾವಣೆ, ಬಿಸಿಯೂಟ ಹೀಗೆ ಮೊದಲೇ ನಾನಾ ಕಾರ್ಯಗಳಲ್ಲಿ ವ್ಯಸ್ತರಾಗಿರುವ ಶಾಲಾ ಶಿಕ್ಷಕರಿಗೆ ಬಿಹಾರದಲ್ಲಿ ಹೊಸತೊಂದು ಜವಾಬ್ದಾರಿ ಹೆಗಲಿಗೆ ಬಿದ್ದಿದೆ. ಅದು - ಕುಡುಕರನ್ನು ಹಿಡಿಯುವುದು! ಬಿಹಾರದಲ್ಲಿ 2016ರಿಂದ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದೆ. ರಾಜ್ಯದಲ್ಲಿ ಎಲ್ಲೂ ಅಕ್ರಮ ಅಥವಾ ಸಕ್ರಮ ಮದ್ಯ ಸಿಗುವಂತಿಲ್ಲ. ಆದರೂ ಶಾಲೆಗಳ ಕಾಂಪೌಂಡ್ ಸೇರಿದಂತೆ ಅನೇಕ ಕಡೆ ಕುಡಿದು ಎಸೆದ ಸಾರಾಯಿ ಬಾಟಲಿಗಳು ಸಿಗುತ್ತಿವೆ. ಜನರು ಕುಡಿದು ತೂರಾಡುವುದು ಅಲ್ಲಲ್ಲಿ ಕಂಡುಬರುತ್ತಿದೆ.ಹೀಗಾಗಿ