ಲಕ್ನೋ : ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿನ ಮದರಸಾಗಳ ಸಮಯವನ್ನು ಒಂದು ಗಂಟೆ ವಿಸ್ತರಿಸಿದೆ ಮತ್ತು ಇದರ ಪರಿಷ್ಕೃತ ಸಮಯವು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ.ಇನ್ನು ಮುಂದೆ ಆರು ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಮದರಸಾಗಳು ಈ ನಿರ್ಧಾರವನ್ನು ಸ್ವಾಗತಿಸಿವೆ. ಆದರೆ ನಮಾಜ್ ಮಾಡುವ ಸಮಯ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿವೆ.ರಾಜ್ಯ ಮದರಸಾ ಶಿಕ್ಷಣ ಮಂಡಳಿಯು ಅನುದಾನಿತ ಮದರಸಾಗಳಿಗೆ ಹೊಸ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರ ಪ್ರಕಾರ ತರಗತಿಗಳು ಬೆಳಗ್ಗೆ 9 ಗಂಟೆಗೆ