ಕೋಯಿಕ್ಕೋಡ್ : ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿದೆ. ಶುಕ್ರವಾರ ಕೋಯಿಕ್ಕೋಡ್ನಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ ವಿಸ್ತರಿಸಲಾಗಿದೆ. ಎಲ್ಲಾ ಶಾಲೆಗಳಿಗೆ ಸೆ.14 ಮತ್ತು 15 ರಂದು ರಜೆ ನೀಡುವಂತೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅಲ್ಲದೆ, ಈ ಆದೇಶ ಅಂಗನವಾಡಿಗಳು, ಮದರಸಾಗಳು, ಬೋಧನಾ ಕೇಂದ್ರಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ಅನ್ವಯಿಸುತ್ತದೆ