ತಿರುವನಂತಪುರಂ : ಕೋಝಿಕ್ಕೋಡ್ನಲ್ಲಿ ಮೃತಪಟ್ಟ ಇಬ್ಬರಲ್ಲಿ ಓರ್ವ ವ್ಯಕ್ತಿಗೆ ನಿಫಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿಫಾ ಸೋಂಕಿನಿಂದಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ವ್ಯಕ್ತಿ ಸೋಮವಾರ ಸಾವನ್ನಪ್ಪಿದ್ದರು. ನಿಫಾ ವೈರಸ್ ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮೃತನ ಸ್ಯಾಂಪಲ್ ಅನ್ನು ಟೆಸ್ಟ್ಗೆ ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಅದರ ರಿಪೋರ್ಟ್ ಬಂದಿದ್ದು, ನಿಫಾ ವೈರಸ್ನಿಂದಲೇ ಮೃತಪಟ್ಟಿರುವುದು ಬಯಲಾಗಿದೆ.ಪುಣೆಯ ನ್ಯಾಷನಲ್