ನವದೆಹಲಿ : ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಸೋಮವಾರದಿಂದ (ಡಿಸೆಂಬರ್ 27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂಗೊಳಿಸಲು ಆದೇಶಿಸಿದ್ದಾರೆ.ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ