ಲಕ್ನೋ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಪ್ರದೇಶವು ರಾತ್ರಿ ಕರ್ಫ್ಯೂ ಕ್ರಮವನ್ನು ಜಾರಿ ಮಾಡಿದೆ. ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.ಹೊರ ರಾಜ್ಯದಿಂದ ಬರುವ ಜನರನ್ನು ಪರೀಕ್ಷಿಸಿ, ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು. ಅಗತ್ಯವಿದ್ದರೆ ಅವರನ್ನು