ರಾಮನಗರ : ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ ಬಾಲಕೃಷ್ಣ ಅವರು ಜೆಡಿಎಸ್ ಸ್ಟಾರ್ ಕ್ಯಾಂಪೇನರ್ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಇದೀಗ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಶುಕ್ರವಾರ ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿದ್ದ ಎಚ್.ಸಿ ಬಾಲಕೃಷ್ಣ ಅವರು, ಸಿನಿಮಾ ನಟರು ಬಂದು ನಾವು ಬೆನ್ನಿಗೆ ಚೂರಿ ಹಾಕ್ತಾರೆ ಅಂತಾ ಹೇಳ್ತಾರೆ. ಅವರು ಬಂದು ಕೇವಲ ಪ್ರಚಾರ ಮಾಡಿಕೊಂಡು ಮತ ಕೇಳಿಕೊಂಡು ಹೋಗಬೇಕು.