ನವದೆಹಲಿ : ಭಾರತೀಯ ಪ್ರಜೆಗಳು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರುವ ಪ್ರಯತ್ನಗಳನ್ನು ನಿಲ್ಲಿಸುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಭಿಯಾನವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಉದಯೋನ್ಮುಖ ಶಕ್ತಿಯಾಗಿ ಬೆಳೆದಿದೆ. ಉಕ್ರೇನ್ನಿಂದ ಭಾರತೀಯರನ್ನು ವಾಪಸ್ ಕರೆತರುವ ಸಾಮರ್ಥ್ಯವೂ ನಮ್ಮ ಸರ್ಕಾರಕ್ಕಿದೆ. ಈ ಪ್ರಯತ್ನವನ್ನು